ಬೆಂಗಳೂರು: “ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು.
ಕಸ ವಿಲೇವಾರಿ ವಿಚಾರವಾಗಿ ಎಸ್ಮಾ ಅಡಿಯಲ್ಲಿ ಪ್ರಕರಣ ದಾಖಲಿಸಲಿ ನಾವು ಅದನ್ನು ಎದುರಿಸಲು ಸಿದ್ಧ ಎಂಬ ಶಾಸಕರ ಧೀರಜ್ ಮುನಿರಾಜು ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಸರಿ, ತೊಂದರೆ ಇಲ್ಲ, ಏನು ಮಾಡಬೇಕೋ ಮಾಡುತ್ತೇವೆ” ಎಂದರು.
ವಿಧಾನಸೌಧದಲ್ಲಿ ನಿಗದಿತ ಸ್ಥಳದಲ್ಲಿ ಮಾತ್ರ ಮಾಧ್ಯಮಗಳಿಗೆ ಅವಕಾಶ ಎಂಬ ಡಿಪಿಐಆರ್ ಆದೇಶದ ಕುರಿತು ಕೇಳಿದಾಗ, “ಡಿ ಪಿ ಐ ಆರ್ ನನ್ನ ವ್ಯಾಪ್ತಿಯಲ್ಲಿ ಇಲ್ಲ. ಈ ಆದೇಶದ ಕುರಿತು ನನಗೆ ಮಾಹಿತಿ ಇಲ್ಲ. ಈ ವಿಚಾರ ಪರಿಶೀಲನೆ ಮಾಡಿ ತಿಳಿಸುತ್ತೇನೆ” ಎಂದು ತಿಳಿಸಿದರು




