By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಬೆಂಗಳೂರು ಉತ್ತರ ನಗರ ಪಾಲಿಕೆ ಸಾರ್ವಜನಿಕರೊಂದಿಗೆ ನೇರ ಸಂವಾದ-ಪರಿಣಾಮಕಾರಿ ಆಡಳಿತದತ್ತ ಮತ್ತೊಂದು ಹೆಜ್ಜೆ
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಬೆಂಗಳೂರು ಉತ್ತರ ನಗರ ಪಾಲಿಕೆ ಸಾರ್ವಜನಿಕರೊಂದಿಗೆ ನೇರ ಸಂವಾದ-ಪರಿಣಾಮಕಾರಿ ಆಡಳಿತದತ್ತ ಮತ್ತೊಂದು ಹೆಜ್ಜೆ

Anukshana Media
Last updated: February 20, 2026 12:50 pm
Anukshana Media
Published: February 20, 2026

ನಾಗರಿಕ ಸೇವೆಗಳ ಸುಧಾರಣೆಗಾಗಿ ಆಯುಕ್ತರಿಂದ ನಿರಂತರ ಫೋನ್–ಇನ್ ಕಾರ್ಯಕ್ರಮಬೆಂಗಳೂರು, ಫೆಬ್ರವರಿ, 20:ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳನ್ನು ಆಲಿಸಿ, ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ, ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಿಗ್ಗೆ 7.00 ಗಂಟೆಗೆ ಅಮೃತಹಳ್ಳಿ ಮುಖ್ಯರಸ್ತೆಯಲ್ಲಿರುವ ನಗರ ಪಾಲಿಕೆಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಫೋನ್–ಇನ್ ಕಾರ್ಯಕ್ರಮವನ್ನು ಆಯೋಜಿಸಿ, ನಾಗರಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದರು.ಈ ಕಾರ್ಯಕ್ರಮದ ವೇಳೆ ವಿವಿಧ ವಾರ್ಡ್‌ಗಳಿಂದ ಬಂದ ಹಲವು ದೂರಗಳನ್ನು ಆಲಿಸಿ, ಅವುಗಳ ತ್ವರಿತ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.ಫೋನ್–ಇನ್ ಕಾರ್ಯಕ್ರಮದ ಪ್ರಗತಿ:ಸೆಪ್ಟೆಂಬರ್ 26ರಿಂದ ಆರಂಭಗೊಂಡ ಈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮದ ಮೂಲಕ ಕಳೆದ 21 ವಾರಗಳಲ್ಲಿ ಒಟ್ಟು 1177 ಅಹವಾಲುಗಳು ದಾಖಲಾಗಿದ್ದು, ಅವುಗಳಲ್ಲಿ 865 ಅಹವಾಲುಗಳಿಗೆ ಈಗಾಗಲೇ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರ ನಗರ ಪಾಲಿಕೆ ವ್ಯಾಪ್ತಿಗೆ ಸೇರದ 72 ಅಹವಾಲುಗಳನ್ನು ಸಂಬಂಧಪಟ್ಟ ಇತರೆ ನಗರ ಪಾಲಿಕೆಗಳು ಹಾಗೂ ಇಲಾಖೆಗಳಿಗೂ ವರ್ಗಾಯಿಸಲಾಗಿದ್ದು, ಉಳಿದ 203 ಅಹವಾಲುಗಳ ಕುರಿತು ತ್ವರಿತ ಕ್ರಮ ಜರುಗಿಸುವಂತೆ ಆಯುಕ್ತರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂದಿನ ಕಾರ್ಯಕ್ರಮದ ವಿವರ:

ಇಂದು ನಡೆದ ಫೋನ್–ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 60 ಕರೆಗಳು ಬಂದಿದ್ದು, ಅವುಗಳ ಮೂಲಕ ಒಟ್ಟು 77 ಅಹವಾಲುಗಳು ದಾಖಲಾಗಿವೆ. ಎಲ್ಲಾ ಅಹವಾಲುಗಳನ್ನು ಪರಿಶೀಲಿಸಿ, ತಕ್ಷಣ ಸ್ಪಂದಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆಗಳ ಸಮರ್ಪಕ ನಿರ್ವಹಣೆಗೆ ಆದ್ಯತೆ:

ರಸ್ತೆ ನಿರ್ವಹಣೆಗೆ ಸಂಬಂಧಿಸಿದಂತೆ 35 ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯಗಳಲ್ಲಿ ಗುಣಮಟ್ಟ ಕಾಪಾಡಿಕೊಂಡು, ಆದ್ಯತೆಯ ಆಧಾರದಲ್ಲಿ ಕೆಲಸಗಳನ್ನು ವೇಗಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತ್ಯಾಜ್ಯ ನಿರ್ವಹಣೆಗೆ ಒತ್ತು:

ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಸಂಬಂಧಿಸಿದಂತೆ 16 ಅಹವಾಲುಗಳು ದಾಖಲಾಗಿದ್ದು, ಎಲ್ಲಾ ವಾರ್ಡ್‌ಗಳಲ್ಲಿ ಸಮಯಪಾಲನೆಯೊಂದಿಗೆ ತ್ಯಾಜ್ಯ ಸಂಗ್ರಹಣೆ ನಡೆಯುವಂತೆ ವೈಜ್ಞಾನಿಕ ವಿಲೇವಾರಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಸಂಬಂಧಪಟ್ಟ ವಿಭಾಗಗಳಿಗೆ ಸೂಚಿಸಿದರು.

ಅಪಾಯ ಸ್ಥಿತಿಯಲ್ಲಿರುವ ಮರಗಳ / ರೆಂಬೆ ಕೊಂಬೆಗಳ ತೆರವು ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ:

ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಪಾಯಸ್ಥಿತಿಯಲ್ಲಿರುವ ಮರ ರೆಂಬೆ ಕೊಂಬೆಗಳನ್ನು ಗುರುತಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರಂತರವಾಗಿ ಮುಂಜಾಗ್ರತಾ ಕ್ರಮ ವಹಿಸಲಾಗುತ್ತಿದ್ದು, ಈ ಕುರಿತು 6 ದೂರುಗಳು ಇಂದಿನ ಫೋನ್ ಇನ್ ಕಾರ್ಯಕ್ರಮದಲ್ಲಿ ದಾಖಲಾಗಿದ್ದು, ಇದಕ್ಕೆ ತ್ವರಿತವಾಗಿ ಸ್ಪಂದಿಸುವಂತೆ ಸಂಬಂಧಪಟ್ಟ ಅರಣ್ಯ ವಿಭಾಗದ ಅಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದರು.

ಹೆಚ್ಚಿನ ಮಾಹಿತಿ:

ಕಳೆದ 21 ವಾರಗಳಲ್ಲಿ ಹಾಗೂ ಇಂದಿನ ದಿನ ವಿವಿಧ ವಿಭಾಗಗಳು ಮತ್ತು ಇಲಾಖೆಗಳ ಮೂಲಕ ಸ್ವೀಕರಿಸಲಾದ ಅಹವಾಲುಗಳ ವಿವರವಾದ ಪ್ರಗತಿ ಪಟ್ಟಿಯನ್ನು ಲಗತ್ತಿಸಲಾಗಿದೆ.

ಪ್ರತಿ ಶುಕ್ರವಾರ ಫೋನ್–ಇನ್ ಕಾರ್ಯಕ್ರಮ:

ನಾಗರಿಕರ ಸಮಸ್ಯೆಗಳಿಗೆ ನೇರ ಪರಿಹಾರ ಒದಗಿಸುವ ಹಾಗೂ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿಯನ್ನು ಪರಿಶೀಲಿಸುವ ಉದ್ದೇಶದಿಂದ, ಆಯುಕ್ತರ ಫೋನ್–ಇನ್ ಕಾರ್ಯಕ್ರಮವು ಪ್ರತಿ ಶುಕ್ರವಾರವೂ ನಿಯಮಿತವಾಗಿ ನಡೆಯಲಿದೆ.

ದೊಡ್ಡ ದೊಡ್ಡ ಹೆಸರು ಬಳಸಿ ವರ್ಕ್ ಫ್ರಮ್ ಹೋಂ ಕೆಲಸದ ಆಫರ್ ನೀಡಿ ವಂಚನೆ ಆರೋಪ.
ಸಕ್ಕರೆನಾಡು ಮಂಡ್ಯದಲ್ಲಿ ವ್ಯಕ್ತಿಯ ಮೇಲೆ ಕ್ರೂರ ದೌರ್ಜನ್ಯ….
ತುಷ್ಟೀಕರಣದಿಂದ ಕಾನೂನು ಕ್ರಮ ಇಲ್ಲ
ಏರ್ಪೋರ್ಟ್.ಫಾಸ್ಟ್ ಟ್ಯಾಗ್ ಇಲ್ಲ ಅಂತ KSRTC ತಡೆದ ಟೋಲ್ ಸಿಬ್ಬಂದಿ
ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗೆ ಜೀವ ಬೆದರಿಕೆ: ಯಂಗ್ ಸ್ಟಾರ್ ಪಕ್ಷದ ರಾಷ್ಟ್ರಾಧ್ಯಕ್ಷ ಶಬಾಜ್ ಖಾನ್ ಆರೋಪ
Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Crime

ವಿಶಾಖ ಉಕ್ಕು ಕಾರ್ಖಾನೆ ದುರಂತ: ಕಾರ್ಮಿಕರ ಸಾವಿನ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ

Anukshana Media
Anukshana Media
June 9, 2026
ಇದು ಪ್ರಕಟಣೆಗೆ ಸೂಕ್ತವಾಗುವಂತೆ ಮರುರಚಿಸಲಾದ ಸುದ್ದಿ:
ಮತದಾರರ ಪಟ್ಟಿ ಪರಿಷ್ಕರಣೆಗೆ ಜೂನ್ 30ರಿಂದ ಮನೆ-ಮನೆ ಸಮೀಕ್ಷೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಸಂತೋಷ್ ಲಾಡ್‌ಗೆ ಡಿಸಿಎಂ, ಶ್ರೀನಿವಾಸ ಮಾನೆಗೆ ಸಚಿವ ಸ್ಥಾನ ನೀಡಲು ಸಕಲ ಮರಾಠ ಸಮಾಜ ಆಗ್ರಹ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?