By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಚಾಲನೆ ನೀಡಿದ ಸಚಿವ ಸಂತೋಷ್ ಲಾಡ್
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಚಾಲನೆ ನೀಡಿದ ಸಚಿವ ಸಂತೋಷ್ ಲಾಡ್

Anukshana Media
Last updated: February 21, 2026 3:00 pm
Anukshana Media
Published: February 21, 2026

“ನಾಡಿನ ಜನರ ಬದುಕು ಬದಲಿಸಿದ ಗ್ಯಾರಂಟಿ ಯೋಜನೆಗಳು; ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳಡಿಯಲ್ಲಿ ರೂ. 3485.02 ಕೋಟಿ ವೆಚ್ಚ”

ಧಾರವಾಡ, ಫೆ.19: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ವ್ಯಾಪಕ ಪರಿಣಾಮ ಬೀರಿವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು.

ಪಟ್ಟಣ ಪಂಚಾಯತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್‍ಇಡಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಷೇತ್ರ ಪ್ರಚಾರ ವಾಹನವು ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 20 ಹಳ್ಳಿಗಳಲ್ಲಿ ಸಂಚರಿಸಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಯೂ ಯೋಜನೆಗಳ ಲಾಭಗಳ ಕುರಿತು ವಿವರಿಸಲಾಗುತ್ತದೆ ಎಂದು ಅವರು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ತಲುಪಬೇಕು. ಕ್ಷೇತ್ರ ಪ್ರಚಾರ ವಾಹನದ ಮೂಲಕ ಮನೆಮನೆಗೆ ತೆರಳಿ ಎಲ್ಲ ಜನರಿಗೂ ಮನಮುಟ್ಟುವಂತೆ ಪ್ರಚಾರವನ್ನು ಮಾಡಬೇಕು ಎಂದು ತಿಳಿಸಿದರು.

ಗ್ಯಾರಂಟಿ ಹಾಡುಗಳಿಗೆ ತಾಳ ಹಾಕಿ, ಹಾಡು ಹಾಡಿದ ಸಚಿವ ಲಾಡ್

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಾಗಿ ರೂಪುಗೊಂಡ ಕಲಾತಂಡಗಳೊಂದಿಗೆ ಸಚಿವರು ಸ್ವತಃ ಸಂಗೀತ ಹಾಡಿ, ತಾಳ ಬಾರಿಸಿ ಕಲಾವಿದರನ್ನು ಪ್ರೋತ್ಸಾಹಿಸಿದರು. ಅವರ ಈ ಸರಳ ಹಾಗೂ ಸ್ನೇಹಪೂರ್ಣ ನಡೆ ಜನಮನ ಗೆದ್ದಿತು. ಕಲೆಯ ಮೂಲಕ ಯೋಜನೆಗಳ ಸಂದೇಶವನ್ನು ಜನರಿಗೆ ತಲುಪಿಸುವ ಪ್ರಯತ್ನ ಗಮನಸೆಳೆಯಿತು. ಈ ಸಂದರ್ಭ ಸಚಿವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಕಲಾವಿದರ ಪ್ರತಿಭೆಯನ್ನು ಮೆಚ್ಚಿದರು. ಈ ಮೂಲಕ ಸಾರ್ವಜನಿಕರಲ್ಲಿ ಉತ್ಸಾಹ ಮೂಡಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಹಾಗೂ ಭಾಗವಹಿಸುವ ಮನೋಭಾವವನ್ನು ಹೆಚ್ಚಿಸಿದರು.

ಕ್ಷೇತ್ರ ಪ್ರಚಾರ ವಾಹನದೊಂದಿಗೆ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಜಾನಪದ ಕಲಾತಂಡದ ನಾಯಕರಾದ ದಾವಲಸಾಬ ದೊಡ್ಡಮನಿ ಅವರ ನೇತೃತ್ವದಲ್ಲಿ ಪ್ರಕಾಶ ಮಡಿವಾಳರ, ರಮೇಶ ಸಜ್ಜಗಾರ, ಗೂಳಪ್ಪ ದುರ್ಗಣ್ಣವರ, ನೌಶಾದ ಬೆಂತೂರ ಅವರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಜನಪದ ಹಾಡುಗಳು ಹಾಗೂ ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯಕ್ರಮವನ್ನು ನೀಡಿದರು.

ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಾನಪ್ಪಗೌಡ ಪಾಟೀಲ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಕಲಘಟಗಿ ತಹಶೀಲ್ದಾರ ಬಸವರಾಜ ಹೊಂಕಣನವರ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪಿ.ವಾಯ್.ಸಾವಂತ, ಕಲಘಟಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ ಬಿ., ಸಿಪಿಐ ಶ್ರೀಶೈಲ ಕೌಜಲಗಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಅಪ್ರಾಪ್ತರ ನಡುವೆ ಗಲಾಟೆ ಹಿಂದೂ ಯುವಕ ಸಾವು ಪ್ರಕರಣ
ತುಷ್ಟೀಕರಣದಿಂದ ಕಾನೂನು ಕ್ರಮ ಇಲ್ಲ
ಬಜೆಟ್ ದಿನಾಂಕ ಶೀಘ್ರ ನಿಗದಿ
ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು.
ಏರ್ಪೋರ್ಟ್.ಫಾಸ್ಟ್ ಟ್ಯಾಗ್ ಇಲ್ಲ ಅಂತ KSRTC ತಡೆದ ಟೋಲ್ ಸಿಬ್ಬಂದಿ
Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Crime

ವಿಶಾಖ ಉಕ್ಕು ಕಾರ್ಖಾನೆ ದುರಂತ: ಕಾರ್ಮಿಕರ ಸಾವಿನ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ

Anukshana Media
Anukshana Media
June 9, 2026
ಇದು ಪ್ರಕಟಣೆಗೆ ಸೂಕ್ತವಾಗುವಂತೆ ಮರುರಚಿಸಲಾದ ಸುದ್ದಿ:
ಮತದಾರರ ಪಟ್ಟಿ ಪರಿಷ್ಕರಣೆಗೆ ಜೂನ್ 30ರಿಂದ ಮನೆ-ಮನೆ ಸಮೀಕ್ಷೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಸಂತೋಷ್ ಲಾಡ್‌ಗೆ ಡಿಸಿಎಂ, ಶ್ರೀನಿವಾಸ ಮಾನೆಗೆ ಸಚಿವ ಸ್ಥಾನ ನೀಡಲು ಸಕಲ ಮರಾಠ ಸಮಾಜ ಆಗ್ರಹ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?