ಬೆಂಗಳೂರು: ಜನರ ಕೆಲಸಕ್ಕೆ ಸಮಯದ ಗಡಿ ಇಲ್ಲ ಎಂಬುದನ್ನು ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಗೋಪಾಲಯ್ಯ ಮತ್ತೆ ಸಾಬೀತು ಮಾಡಿದ್ದಾರೆ. ಬಹುತೇಕರು ವಿಶ್ರಾಂತಿಯಲ್ಲಿ ಇರುವ ಮಧ್ಯರಾತ್ರಿ 12 ಗಂಟೆಯಲ್ಲೇ ಅವರು ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಈಗ ಜನರ ಗಮನ ಸೆಳೆಯುತ್ತಿದೆ.
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್‌ನ 5ನೇ ಮುಖ್ಯರಸ್ತೆ ಹಾಗೂ 13ನೇ ಕ್ರಾಸ್‌ನಲ್ಲಿ ನಡೆಯುತ್ತಿರುವ ಡಾಂಬರೀಕರಣ ಕಾಮಗಾರಿ ಸ್ಥಳಕ್ಕೆ ಅವರು ಅಚ್ಚರಿಯ ಭೇಟಿ ನೀಡಿದರು. ಕಾಮಗಾರಿಯ ಗುಣಮಟ್ಟ ಹೇಗಿದೆ, ಕೆಲಸ ಸರಿಯಾಗಿ ನಡೆಯುತ್ತಿದೆಯೇ ಎಂಬುದನ್ನು ಖುದ್ದಾಗಿ ಪರಿಶೀಲಿಸಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದರು.
“ಜನರಿಗೆ ಉತ್ತಮ ರಸ್ತೆ ಸೌಲಭ್ಯ ಸಿಗಬೇಕು, ಕೆಲಸದಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು” ಎಂಬ ಸಂದೇಶವನ್ನು ಅಧಿಕಾರಿಗಳಿಗೆ ನೀಡಿದ ಗೋಪಾಲಯ್ಯ, ರಾತ್ರಿ-ಹಗಲು ಎನ್ನದೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದು ಸ್ಥಳೀಯರಲ್ಲಿ ಮೆಚ್ಚುಗೆಗೆ ಕಾರಣವಾಗಿದೆ.




