ದೇವನಹಳ್ಳಿ: ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ಆಮಿಷವೊಡ್ಡಿ 15 ಲಕ್ಷ ರೂಪಾಯಿ ದೋಚಿದ್ದ ಪ್ರಕರಣವನ್ನು ವಿಜಯಪುರ ಪೊಲೀಸರು ಕೇವಲ ಎರಡು ದಿನಗಳಲ್ಲೇ ಭೇದಿಸಿ ಐದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆ ಬಳಿ ನಡೆದಿದೆ.
ಗುರುವಾರ ನಡೆದಿದ್ದ ಈ ರಾಬರಿ ಪ್ರಕರಣದಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ಏಳು ಜನ ದುಷ್ಕರ್ಮಿಗಳು, ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಹಣ ಪಡೆದು ಪರಾರಿಯಾಗಿದ್ದರು.
ಐವರು ಆರೋಪಿಗಳು ಪೊಲೀಸ್ ವಶಕ್ಕೆ
ಪ್ರಕರಣ ಸಂಬಂಧ ವಿಜಯಪುರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಗಳು: ಗಣೇಶ್ (25) ಸಾಗರ (28) ಮಂಜಪ್ಪ (40) ಷಣ್ಮುಘ (24) ಷಣ್ಮುಖ (31)
ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
15 ಲಕ್ಷ ನಗದು ಸೇರಿದಂತೆ ಸಾಕ್ಷ್ಯ ವಶ
ಆರೋಪಿಗಳಿಂದ ಪೊಲೀಸರು ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅವುಗಳಲ್ಲಿ:
- ₹15 ಲಕ್ಷ ನಗದು
- 4 ಚಿನ್ನದ ನಾಣ್ಯಗಳು
- 3 ಮೊಬೈಲ್ ಫೋನ್‌ಗಳು
- ಕೃತ್ಯಕ್ಕೆ ಬಳಸಿದ್ದ ಕ್ರೇಟಾ ಕಾರು
ಇವುಗಳನ್ನು ವಶಕ್ಕೆ ಪಡೆದು ಸ್ಥಳ ಮಹಜರು ನಡೆಸಲಾಗಿದೆ.
ನ್ಯಾಯಾಲಯಕ್ಕೆ ಹಾಜರು – ಕಸ್ಟಡಿ ಕೇಳಿದ ಪೊಲೀಸರು
ಬಂಧಿತ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಪೊಲೀಸರ ತ್ವರಿತ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ
ದೇವನಹಳ್ಳಿ ಸಮೀಪ ನಡೆದಿದ್ದ ಈ ದೋಚಾಟ ಪ್ರಕರಣವನ್ನು ಕೇವಲ ಎರಡು ದಿನಗಳಲ್ಲಿ ಭೇದಿಸಿದ ವಿಜಯಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.




