By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಬಜೆಟ್ ನಲ್ಲಿ ಚಾಲಕ ಸಮುದಾಯದ ನಿರ್ಲಕ್ಷ್ಯ : ರಸ್ತೆ ತೆರಿಗೆ ಪಾವತಿ ಸ್ಥಗಿತ ಚಳವಳಿಯ ಎಚ್ಚರಿಕೆ
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಬಜೆಟ್ ನಲ್ಲಿ ಚಾಲಕ ಸಮುದಾಯದ ನಿರ್ಲಕ್ಷ್ಯ : ರಸ್ತೆ ತೆರಿಗೆ ಪಾವತಿ ಸ್ಥಗಿತ ಚಳವಳಿಯ ಎಚ್ಚರಿಕೆ

Anukshana Media
Last updated: March 7, 2026 2:15 pm
Anukshana Media
Published: March 7, 2026

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27 ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಖಾಸಗಿ ಚಾಲಕರು, ಮಾಲೀಕ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ವಲಯವನ್ನು ನಿರ್ಲಕ್ಷಿಸಲಾಗಿದೆ ಎಂದು ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಆರೋಪಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಚಾಲಕರ ಸಮಸ್ಯೆಗಳನ್ನು ಸರ್ಕಾರ ಕಡೆಗಣಿಸಿದೆ. ಬಜೆಟ್ ಪೂರ್ವಭಾವಿ ಸಭೆಯಲ್ಲಿ ನೀಡಿದ ಯಾವುದೇ ಮನವಿಗಳನ್ನು ಪರಿಗಣಿಸದೇ ಚಾಲಕ ಸಮುದಾಯವನ್ನು ಕಡೆಗಣಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ ಬೊಕ್ಕಸ ತುಂಬಿಸಲು ಚಾಲಕ ಸಮುದಾಯ ಪ್ರತಿ ಮೂರು ತಿಂಗಳಿಗೊಮ್ಮೆ ಹಳದಿ ಬೋರ್ಡ್, ಟ್ಯಾಕ್ಸಿ, ಲಾರಿ, ಬಸ್ಸು, ಶಾಲಾ ವಾಹನಗಳು ಒಳಗೊಂಡಂತೆ ಬಹುತೇಕ ವಲಯದ ವಾಹನಗಳು ನಿರಂತರವಾಗಿ ತೆರಿಗೆ ಪಾವತಿಸುತ್ತಿವೆ. ಆದರೆ ನಮ್ಮ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸದೇ ಇರುವುದು ಅತೀವ ನೋವುಂಟು ಮಾಡಿದೆ. ಸರ್ಕಾರದ ಧೋರಣೆ ಪ್ರತಿಭಟಿಸಿ ತೆರಿಗೆ ಪಾವತಿ ಸ್ಥಗಿತ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅಪಘಾತ ತಪ್ಪಿಸಲು ಹೆದ್ದಾರಿಗಳಲ್ಲಿ ಪ್ರತಿ 100 ಕಿಲೋಮೀಟರ್ ಗೆ ವಿಶ್ರಾಂತಿ ಗೃಹ ನಿರ್ಮಾಣ, ಆಂಬುಲೆನ್ಸ್ ಸೌಲಭ್ಯ, ಲಾರಿ ಚಾಲಕರು ರಾಷ್ಟ್ರೀಯ ಹೆದ್ದಾರಿ ಸಮೀಪ ವಿಶ್ರಾಂತಿ ಪಡೆಯುವ ಸಮಯದಲ್ಲಿ ಲಾರಿಗಳಲ್ಲಿ ಡಿಸೇಲ್ ಕಳ್ಳತನ ಮತ್ತು ಚಾಲಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ದರೋಡೆ ಮಾಡುತ್ತಿದ್ದು, ಪೊಲೀಸ್ ಗಸ್ತು ಹೆಚ್ಚಿಸುವಂತೆ ಕೋರಲಾಗಿತ್ತು. ಆದರೆ ಯಾವುದೇ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದಿದ್ದಾರೆ.

ಪ್ರತಿವರ್ಷ ಚಾಲಕರ ದಿನಾಚರಣೆ  ಆಚರಿಸಿ ಉತ್ತಮ ಚಾಲಕರನ್ನು ಪ್ರೋತ್ಸಾಹಿಸಬೇಕು. ಅಪಘಾತ ತಪ್ಪಿಸಲು ಚಾಲಕರ ತರಬೇತಿ ಕೇಂದ್ರ ಸ್ಥಾಪಿಸಬೇಕು. ರಾಜ್ಯದಲ್ಲಿ ಬಾಡಿಗೆ ದರವನ್ನು “ಒನ್ ಸಿಟಿ ಒನ್ ರೇಟ್” ಎಂಬ ನಿಯಮವನ್ನು ನಿಗದಿಪಡಿಸುವಂತೆ  ಕೋರಲಾಗಿತ್ತು. ಈ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಬಜೆಟ್ ನಲ್ಲಿ ಪರಿಗಣಿಸಿಲ್ಲ ಎಂದು ಗಂಡಸಿ ಸದಾನಂದ ಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಂಎಸ್‌ಎಂಇ, ತಂತ್ರಜ್ಞಾನಕ್ಕೆ ಉತ್ತೇಜನ ನೀಡಿದ ಬಜೆಟ್: ಎಫ್‌ಕೆಸಿಸಿಐ ಸ್ವಾಗತ
ಕರ್ನಾಟಕ ಬಜೆಟ್ 2026–27: 50 ಪ್ರಮುಖ ಹೈಲೈಟ್ಸ್
ಬಜೆಟ್‌ನಲ್ಲಿ ಆಹಾರ ಇಲಾಖೆಗೆ ಏನು ಸಿಕ್ಕಿತು? ಅನ್ನಭಾಗ್ಯದಿಂದ ‘ಇಂದಿರಾ ಫುಡ್ ಕಿಟ್’ವರೆಗೆ ಪ್ರಮುಖ ಘೋಷಣೆಗಳು
ವೈದ್ಯಕೀಯ ಶಿಕ್ಷಣ ಇಲಾಖೆಗೆ ಬಜೆಟ್‌ ಬಲ
ಆರ್ಥಿಕ ಒತ್ತಡಗಳ ನಡುವೆಯೂ 17ನೇ ಬಜೆಟ್ ಮಂಡಿಸಿದ ಸಿಎಂ: ಕಲ್ಯಾಣ ಯೋಜನೆ, ಅಭಿವೃದ್ಧಿಗೆ ಹೆಚ್ಚಿನ ಒತ್ತು
Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Crime

ವಿಶಾಖ ಉಕ್ಕು ಕಾರ್ಖಾನೆ ದುರಂತ: ಕಾರ್ಮಿಕರ ಸಾವಿನ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ

Anukshana Media
Anukshana Media
June 9, 2026
ಇದು ಪ್ರಕಟಣೆಗೆ ಸೂಕ್ತವಾಗುವಂತೆ ಮರುರಚಿಸಲಾದ ಸುದ್ದಿ:
ಮತದಾರರ ಪಟ್ಟಿ ಪರಿಷ್ಕರಣೆಗೆ ಜೂನ್ 30ರಿಂದ ಮನೆ-ಮನೆ ಸಮೀಕ್ಷೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಸಂತೋಷ್ ಲಾಡ್‌ಗೆ ಡಿಸಿಎಂ, ಶ್ರೀನಿವಾಸ ಮಾನೆಗೆ ಸಚಿವ ಸ್ಥಾನ ನೀಡಲು ಸಕಲ ಮರಾಠ ಸಮಾಜ ಆಗ್ರಹ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?