ಬೆಂಗಳೂರು: ಬಸವನನಾಡು ಹಾಗೂ ಸೂಫಿ ಸಂತಗಳ ನೆಲೆಬೀಡು ಬೀದರದಲ್ಲಿ ಇದೇ ಏಪ್ರಿಲ್ 11 ಮತ್ತು 12ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಹ್ವಾನ ನೀಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ ಖಂಡ್ರೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಬೆಂಗಳೂರಿನ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಸಮ್ಮೇಳನದ ಉದ್ಘಾಟನೆಗೆ ಆಗಮಿಸುವಂತೆ ವಿನಂತಿಸಿದರು.
ರಾಜ್ಯದ ವಿವಿಧ ಭಾಗಗಳಿಂದ ಪತ್ರಕರ್ತರು ಭಾಗವಹಿಸಲಿರುವ ಈ ಸಮ್ಮೇಳನವು ವೃತ್ತಿ ಸಂಬಂಧಿತ ಚರ್ಚೆಗಳು, ಮಾಧ್ಯಮ ಕ್ಷೇತ್ರದ ಸವಾಲುಗಳು ಹಾಗೂ ಭವಿಷ್ಯದ ದಿಕ್ಕುಗಳನ್ನು ಒಳಗೊಂಡ ಪ್ರಮುಖ ವೇದಿಕೆಯಾಗಿ ಪರಿಣಮಿಸುವ ನಿರೀಕ್ಷೆಯಿದೆ.




