ಏಪ್ರಿಲ್ 14 ರಂದು ಜ್ಞಾನಭಾರತಿ ಆವರಣದಲ್ಲಿ ಕಾರ್ಯಕ್ರಮ
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ನಾಳೆ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರ 135 ನೇ ಜಯಂತಿ ಆಚರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿಗಳು ಡಾ.ಜಯಕರ ಎಸ್.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಖ್ಯಾತ ಬರಹಗಾರರು ಡಾ.ಬಂಜೆಗೆರೆ ಜಯಪ್ರಕಾಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‌ರವರ 135 ನೇ ಜಯಂತಿ ಆಚರಣೆಯ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು, 2 ದಿನದ ರಾಷ್ಟ್ರೀಯ ವಿಚಾರ ಸಂಕಿರಣ, ರಕ್ತದಾನ ಶಿಬಿರ ಹಾಗೂ ಜ್ಞಾನಭಾರತಿ ಸ್ವಚ್ಚತಾ ಅಭಿಯಾನ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಕುಲಸಚಿವರು ಕೆ.ಟಿ.ಶಾಂತಲಾ,
ಕುಲಸಚಿವರು (ಮೌಲ್ಯಮಾಪನ) ಪ್ರೊ.ಸಿ.ಎಸ್.ಕರಿಗಾರ್, ವಿತ್ತಾಧಿಕಾರಿಗಳು ಡಾ.ಸುನೀತಾ ಎಂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ವಿಶೇಷಾಧಿಕಾರಿಗಳು ಪ್ರೊ.ಜಿ.ಕೃಷ್ಣಮೂರ್ತಿ,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ನಿರ್ದೇಶಕರು ಪ್ರೊ.ಪಿ.ಸಿ.ನಾಗೇಶ್, ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರು ಪ್ರೊ.ಸಿ.ಸೋಮಶೇಖರ್ ಉಪಸ್ಥಿತರಿರಲಿದ್ದಾರೆ.




