ನಗರದ ಕಗ್ಗದಾಸಪುರದಲ್ಲಿ ಬೀದಿನಾಯಿಗಳ ನಾಪತ್ತೆ ಕುರಿತಂತೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿಗಳ ಮೇಲಿನ ಹಿಂಸೆ ನೆನೆದು ರಮ್ಯಾ ಸ್ವಾತಂತ್ರ್ಯ ಉದ್ಯಾನದಲ್ಲಿ ಗಳಗಳನೆ ಅತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಬೀದಿ ನಾಯಿಗಳ ಬಲವಂತದ ಸ್ಥಳಾಂತರ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರಮ್ಯಾ, ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸುತ್ತಿರುವುದು ಅಮಾನವೀಯ.
ನಾಪತ್ತೆಯಾಗಿರುವ ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾದಾಗ ನನಗೆ ಆಘಾತ ಆಯಿತು. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ನಾಯಿಗಳ ಮೇಲಿನ ಕ್ರೌರ್ಯದ ವಿಡಿಯೋ ನೋಡಿ, ನನ್ನ ರಕ್ತ ಕುದಿಯುತ್ತಿದೆ. ನಾಪತ್ತೆಯಾಗಿರುವ ನಾಯಿಗಳು ಸುರಕ್ಷಿತವಾಗಿದ್ದರೆ ನಮಗೆ ತೋರಿಸಿ, ಇಲ್ಲದಿದ್ದರೆ ಈ ಕೃತ್ಯಕ್ಕೆ ಕಾರಣರಾದವರನ್ನು ಶಿಕ್ಷಿಸಿ ಎಂದು ನಟಿ ರಮ್ಯಾ ಆಗ್ರಹಿಸಿದ್ದಾರೆ.




