By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮೇ 27 ಬೃಹತ್ ಪ್ರತಿಭಟನಾ ಸಮಾವೇಶ
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮೇ 27 ಬೃಹತ್ ಪ್ರತಿಭಟನಾ ಸಮಾವೇಶ

Anukshana Media
Last updated: May 21, 2026 10:06 pm
Anukshana Media
Published: May 21, 2026

ಬೆಂಗಳೂರು: ಮಾದಿಗ ಸಂಘಟನೆಗಳ ಒಕ್ಕೂಟ ದಿನಾಂಕ: ಮೇ 27ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ. ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ, ರೋಸ್ಟರ್ ಬಿಂದು, SCSP/TSP ಹಾಗೂ ಮೀಸಲಾತಿ ಇರುವ ಕಡೆಯಲೆಲ್ಲಾ ಒಳ ಮೀಸಲಾತಿ ಅಳವಡಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲು ಉದ್ದೇಶಿದೆ ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಡಾ. ಎನ್ ಮೂರ್ತಿ ತಿಳಿಸಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 75 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಒದಗಿಸಲಾದ ಮೀಸಲಾತಿಯಿಂದ ವಂಚಿತರಾದ ಮಾದಿಗ ಸಮುದಾಯಗಳಿಗೆ ಸಮಾನ ಅವಕಾಶಗಳನ್ನು ಒದಗಿಸಿಕೊಡುವ ಹಾಗೂ 101 ಪರಿಶಿಷ್ಟ ಜಾತಿಗಳಿಗೂ ಮೀಸಲಾತಿ ಸಮನಾಗಿ ಹಂಚಿಕೆಯ ಏಕೈಕ ಉದ್ದೇಶದಿಂದ ಒಳ ಮೀಸಲಾತಿ ವ್ಯವಸ್ಥೆ ತಂದಿದೆ. ಸುಪ್ರೀಂಕೋರ್ಟ್‌ ನ 7 ಜನ ನ್ಯಾಯಾದೀಶರ ತೀರ್ಪು ಬಂದು 2 ವರ್ಷವಾಗಿವೆ. ಆಂಧ್ರ, ತೆಲಂಗಾಣ, ತಮಿಳುನಾಡು, ಪಂಜಾಬ್, ಹರಿಯಾಣ ಇತರೆ ರಾಜ್ಯಗಳು ತತ್‌ಕ್ಷಣ ಒಳಮೀಸಲಾತಿ ಜಾರಿಗೊಳಿಸಿವೆ. ರಾಜ್ಯದಲ್ಲಿ ಗೌರವಾನ್ವಿತ ನಿವೃತ್ತ ನ್ಯಾಯಾದೀಶರಾದ ಸದಾಶಿವ, ನಾಗಮೋಹನ್‌ದಾಸ್ ಹಾಗೂ ಜೆ.ಸಿ.ಮಾಧುಸ್ವಾಮಿ ವರದಿಯನ್ನು ಸರ್ಕಾರ ತಳ್ಳಿ ಹಾಕಿತು. ಒಳಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದು ಬೀಸೋ ದೊಣ್ಣೆ ಏಟಿಗೆ ತಪ್ಪಿಸಿಕೊಳ್ಳಲು ಒಳಮೀಸಲಾತಿ ಜಾರಿಗೆ ತಂದಿರುವುದಾಗಿ ಬೀಗುತ್ತಿದೆ. ಇದು ರಾಜಕೀಯ ತಂತ್ರಗಾರಿಕೆಯ ಅವೈಜ್ಞಾನಿಕ ಒಳಮೀಸಲಾತಿಯಾಗಿದೆ ಎಂದವರು ದೂರಿದರು.

ಕರ್ನಾಟಕ ಸರ್ಕಾರ ಇದೇ ಸಾಲಿನ ಮೇ ಎಂಟ ರಂದು ಒಳಮೀಸಲಾತಿ ಜಾರಿಗೊಳಿಸಿ ಹೊರಡಿಸಿರುವ ಅಧಿಸೂಚನೆಯು ಕಾನೂನು ಬಾಹಿರ ಹಾಗೂ ಅವೈಜ್ಞಾನಿಕ ಮತ್ತು ಗೊಂದಲದ ಗೂಡಾಗಿದೆ ಹಾಗೂ ಒಳಮೀಸಲಾತಿಯ ಉದ್ದೇಶ ವಿಫಲವಾಗಿದೆ ಎಂದವರು ಆಕ್ಷೇಪ ವ್ಯಕ್ತಪಡಿಸಿದರು.

ಒಳ ಮೀಸಲಾತಿ ಅಧಿಸೂಚನೆಯ ಕಂಡಿಕೆ 3 ರಲ್ಲಿ 3 ಕ್ಕಿಂತ ಕಡಿಮೆ ರೋಸ್ಟರ್ ಹುದ್ದೆಗಳು ಲಭ್ಯವಾಗುತ್ತಿದ್ದಲ್ಲಿ ಪರಿಶಿಷ್ಟ 101 ಜಾತಿಗಳು ಈ ಹುದ್ದೆಗೆ ಸ್ಪರ್ಧಿಸಬೇಕು ಎಂದು ಆದೇಶಿಸಿದೆ. ಇದು ಒಳಮೀಸಲಾತಿ ಅನ್ವಹಿಸುವುದಿಲ್ಲ. ಈಗಾಗಿ ಪರಿಶಿಷ್ಟ ಜಾತಿಗಳಿಗೆ 3 ಕ್ಕಿಂತ ಹೆಚ್ಚು ಹುದ್ದೆಗಳು ಲಭ್ಯವಿದ್ದರೆ ಮಾತ್ರ ಒಳಮೀಸಲಾತಿ ಕಲ್ಪಿಸಲು ಸೂಚಿಸಿದೆ.
ಅಂದರೆ ಪರಿಶಿಷ್ಟ ಜಾತಿಯ ABC ಗುಂಪುಗಳಿಗೆ ರೋಸ್ಟರ್ ಸಂಖ್ಯೆ 1.9.15 ಬಿಂದುಗಳು ಲಭ್ಯವಾಗದಿದ್ದರೆ 101 ಪರಿಶಿಷ್ಟ ಜಾತಿಗಳಲ್ಲಿ ಸ್ಪರ್ಧಿಸಲು ಆದೇಶದಲ್ಲಿ ಉಲ್ಲೇಖಿಸಿದೆ ಎಂದು ಡಾಕ್ಟರ್ ಮೂರ್ತಿಯವರು ವಿವರಿಸಿದರು.

ಇವೆಲ್ಲ ಕಾರಣಗಳಿಂದಾಗಿ B ಮತ್ತು C ಈ ಬಲಿಷ್ಟ ಜಾತಿಗಳೊಂದಿಗೆ ಮಾದಿಗ ಸಮುದಾಯ ಮತ್ತು ಅಲೆಮಾರಿ ಜಾತಿಗಳು ಸ್ಪರ್ಧಿಸಿ ತನ್ನ ಪಾಲು ಪಡೆಯಲು ಸಾಧ್ಯವಿಲ್ಲ. ಈಗಾಗಿ ಪರಿಶಿಷ್ಟ ಜಾತಿಗಳಿಗೆ ಮೀಸಲಿರಿಸಿರುವ ಬಹುತೇಕ ಹುದ್ದೆಗಳು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಬಲಾಡ್ಯರಾಗಿರುವ ಪರಿಶಿಷ್ಟ ಜಾತಿಗಳ ಪಾಲಾಗುವಂತೆ ಹುನ್ನಾರ ನಡೆಸಲಾಗಿದೆ ಎಂದವರು ಆಕ್ಷೇಪ ವ್ಯಕ್ತಪಡಿಸಿವೆ.

ಸದರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೈ ಭೀಮ್ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಡಾ ಬಿ ಆರ್ ಮುನಿರಾಜ್ ಅವರು ‘ಒಳಮೀಸಲಾತಿಯು ಪರಿಶಿಷ್ಟ ಜಾತಿಗಳಿಗೆ 3 ಕ್ಕಿಂತ ಕಡಿಮೆ ರೋಸ್ಟರ್ ಹುದ್ದೆಗಳು ಲಭ್ಯವಾದರೆ ಪರಿಶಿಷ್ಟ ಸಾಮಾನ್ಯ ಎಂಬುದು ಅವೈಜ್ಞಾನಿಕ ಮತ್ತು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಉಲ್ಲಂಘನೆ ಹಾಗೂ ಅಸಂವಿಧಾನಿಕ ಆದೇಶವಾಗಿದೆ.
ಆದುದರಿಂದ ಇದರ ಪರಿಣಾಮ ಬಹುತೇಕ ಗೆಜೆಟೆಡ್ ಕ್ಲಾಸ್ 1, 2 ಹುದ್ದೆಗಳು, ತಾಂತ್ರಿಕ ಶಿಕ್ಷಣ ಸಂಸ್ಥೆಗಳು, ವಿಶ್ವ ವಿದ್ಯಾಲಯದ ಕುಲಪತಿ, ಕುಲಸಚಿವ, ಪ್ರಾಧ್ಯಾಪಕ. ಸಹಾಯ ಪ್ರಾಧ್ಯಪಕ, ಹೆಚ್ಚುವರಿ ಪ್ರಾಧ್ಯಾಪಕ ಇತರೆ ಹುದ್ದೆಗಳು ಹಾಗೂ ಹಲವಾರು ಇಲಾಖೆಗಳಲ್ಲಿ ಮತ್ತು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ನೇಮಕಾತಿಗಳು, ಕಲ್ಯಾಣ ಕರ್ನಾಟಕದ ಮೀಸಲಾತಿ ಹುದ್ದೆಗಳು ಅಲ್ಲದೆ ನೂರಾರು ಅನುದಾನ ಮತ್ತು ಅನುದಾನರಹಿತ ಸಂಸ್ಥೆಗಳ ಶಾಲಾ, ಕಾಲೇಜುಗಳಲ್ಲಿನ ಹುದ್ದೆಗಳಲ್ಲಿ ಲಭ್ಯವಾಗುವ ಹುದ್ದೆಗಳಲ್ಲಿ ಒಳಮೀಸಲಾತಿ ದೊರೆಯದಂತೆ ವ್ಯವಸ್ಥಿತ ಷಡ್ಯಾಂತರ ರೂಪಿಸಲಾಗಿದೆ.

ಬಡ್ತಿ ಮತ್ತು ಮುಂಬಡ್ತಿಯಲ್ಲಿ ಮೀಸಲಾತಿ ನೀಡಿಲ್ಲ ಹಾಗೂ ಆದಿ ಕರ್ನಾಟಕ, ಆದಿದ್ರಾವಿಡ, ಆದಿ ಅಂದ್ರ ಜಾತಿಗಳಿಗೆ ನಾಗಮೋಹನ್ ದಾಸ್ ಆಯೋಗ ಶೇ.1% ರಷ್ಟು ಮೀಸಲಾತಿ ನೀಡಿತ್ತು. ಆದರೆ ಈ ಗುಂಪನ್ನು ತುಂಡರಿಸಿ ಈ ಜಾತಿಗಳನ್ನು ಗೊಂದಲದಲ್ಲಿ ಕೆಡವಿದೆ.

59 ಅಲೆಮಾರಿ ಮತ್ತು ಅರೆಅಲೆಮಾರಿ ಜಾತಿಗಳು ತೀರ ಹಿಂದುಳಿದಿದ್ದು ಈ ಜಾತಿಗಳಿಗೆ ವಿಶೇಷ ಸ್ಥಾನ ನೀಡಿದ ಆಯೋಗ ಎ ಗ್ರೂಪ್‌ ನಲ್ಲಿ ಶೇ.1% ರಷ್ಟು ಮೀಸಲಾತಿ ನೀಡಿತ್ತು. ಸರ್ಕಾರ ಯಾವ ಆಯೋಗದ ವರದಿಯನ್ನು ಆಧರಿಸಿದೆ. ‘ಸಿ’ ಗ್ರೂಪ್‌ನ ಬಲಿಷ್ಟ ಜಾತಿಗಳೊಂದಿಗೆ ಸೇರಿಸಿ ತೀವ್ರ ಅನ್ಯಾಯ ಮಾಡಿದೆ. ಈ ಕರಾಳ ಆದೇಶ ಈ ಜಾತಿಗೆ ಮರಣ ಶಾಸನವಾಗಿದೆ.

ಆದ್ದರಿಂದ ಒಳಮೀಸಲಾತಿಗಾಗಿ 35 ವರ್ಷಗಳ ಚರಿತ್ರಾರ್ಹ ಹೋರಾಟ ನಡೆಸಿಕೊಂಡು ಬಂದ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳು ಒಟ್ಟಿಗೆ ರಚಿಸಿಕೊಂಡಿರುವ “ಮಾದಿಗ ಸಂಘಟನೆಗಳ ನೇತೃತ್ವದಲ್ಲಿ ಮೇ 27 ರಂದು ಪ್ರಿಡಂ ಪಾರ್ಕ್‌ನಲ್ಲಿ “ಬೃಹತ್ ಪ್ರತಿಭಟನಾ ಧರಣಿ” ನಡೆಸಲು ತೀರ್ಮಾನಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಗೌರವ ಅಧ್ಯಕ್ಷರಾದ ಕೇಶವಮೂರ್ತಿಯವರು, ಅಖಿಲ ಭಾರತ ಮಾದಿಗ ದಂಡೋರಾದ ರಾಜ್ಯಾಧ್ಯಕ್ಷರಾದ ಹುಸೇನಪ್ಪಾ ಮಾದರ್
‘3 ಕ್ಕಿಂತ ಕಡಿಮೆ ಹುದ್ದೆಗಳನ್ನು ಎಸ್ ಸಿ ಸಾಮಾನ್ಯ ಎಂದು ಪರಿಗಣಿಸುವ ಅವೈಜ್ಞಾನಿಕ ಷರತ್ತು ಹಿಂಪಡೆಯಬೇಕು.

ಪರಿಶಿಷ್ಟ ಜಾತಿಗೆ ಮೀಸಲಾತಿ ಇರುವ ಎಲ್ಲಾಕಡೆ ಒಳ ಮೀಸಲಾತಿ ಅಳವಡಿಸಿ ಆದೇಶಿಸಬೇಕು.

ನಾಲ್ಕು ಆಯೋಗಗಳ ವರದಿಯ ಅಂಕಿ ಅಂಶಗಳನ್ನು ಪರಿಗಣಿಸಿ ಜನಸಂಖ್ಯೆಗೆ ಅನುಗುಣವಾಗಿ ಮಾದಿಗ ಸಮುದಾಯಕ್ಕೆ ಶೇಕಡ 6 ಮೀಸಲಾತಿಯನ್ನು ಒದಗಿಸಬೇಕು.

ಸರ್ಕಾರದ ನೌಕರರಿಗೆ ಬಡ್ತಿಯಲ್ಲಿ ಮತ್ತು ಮುಂಬಡ್ತಿಯಲ್ಲಿ ಒಳ ಮೀಸಲಾತಿ ಅಳವಡಿಸಿಆದೇಶಿಸಬೇಕು.
SCSP/TSP 49,000 ಅನ್ವಯ ಹಂಚಿಕೆಯಾಗಬೇಕು ಸೇರಿದಂತೆ ಇನ್ನಿತರ ಹಕ್ಕೊತ್ತಾಯಗಳನ್ನು ಮಂಡಿಸಿದರು.

ಶಿಸ್ತು ಕ್ರಮ ಮತ್ತು ಟಾರ್ಗೆಟ್ ರಾಜಕೀಯ ಬೇರೆ: ದಿನೇಶ್ ಗುಂಡೂರಾವ್ ಸ್ಪಷ್ಟನೆ
ಒಳ ಮೀಸಲಾತಿ ರೋಸ್ಟರ್ ವಿರೋಧಿಸಿ ಮಾ.24 ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ
‘ಪ್ಲೀಸ್ ಹೋಗ್ಬೇಡಿ ಸರ್…’ ವಿಧಾನಸೌಧದಲ್ಲಿ ಭಾವುಕ ದೃಶ್ಯ: ಸಿಎಂ ಕಚೇರಿ ಸಿಬ್ಬಂದಿ ಕಣ್ಣೀರು, ಸಿದ್ದರಾಮಯ್ಯ ಸಮಾಧಾನ
2026ರ ವಿ.ಪಿ.ಸಿಂಗ್ ಹಾಗೂ ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಘೋಷಣೆ
Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Crime

ವಿಶಾಖ ಉಕ್ಕು ಕಾರ್ಖಾನೆ ದುರಂತ: ಕಾರ್ಮಿಕರ ಸಾವಿನ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ

Anukshana Media
Anukshana Media
June 9, 2026
ಇದು ಪ್ರಕಟಣೆಗೆ ಸೂಕ್ತವಾಗುವಂತೆ ಮರುರಚಿಸಲಾದ ಸುದ್ದಿ:
ಮತದಾರರ ಪಟ್ಟಿ ಪರಿಷ್ಕರಣೆಗೆ ಜೂನ್ 30ರಿಂದ ಮನೆ-ಮನೆ ಸಮೀಕ್ಷೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಸಂತೋಷ್ ಲಾಡ್‌ಗೆ ಡಿಸಿಎಂ, ಶ್ರೀನಿವಾಸ ಮಾನೆಗೆ ಸಚಿವ ಸ್ಥಾನ ನೀಡಲು ಸಕಲ ಮರಾಠ ಸಮಾಜ ಆಗ್ರಹ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?