Full site
Appointment

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

By Anukshana News Desk1 min readಕರ್ನಾಟಕ

ಬೆಂಗಳೂರು, ಅ. 12: ಕರ್ನಾಟಕದ ನೂತನ ರಾಜ್ಯಪಾಲರಾಗಿ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ. ಹರಿಯಾಣದ ಮಹೇಂದ್ರಗಢ ಕ್ಷೇತ್ರದ ಮಾಜಿ ಸಂಸದೆಯಾಗಿರುವ ಅವರು ರಸಾಯನಶಾಸ್ತ್ರದಲ್ಲಿ ಚಿನ್ನದ ಪದಕ ವಿಜೇತೆ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಬಿಎಸ್‌ಎಫ್ ಡೆಪ್ಯುಟಿ ಕಮಾಂಡೆಂಟ್ ಸುಖಬೀರ್ ಸಿಂಗ್ ಯಾದವ್ ಅವರ ಪತ್ನಿಯಾಗಿರುವ ಸುಧಾ ಯಾದವ್, ಸುದೀರ್ಘ ರಾಜಕೀಯ ಹಾಗೂ ಸಾರ್ವಜನಿಕ ಸೇವೆಯ ಅನುಭವ ಹೊಂದಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಸ್ಥಾನವನ್ನು ಅವರು ವಹಿಸಿಕೊಳ್ಳಲಿದ್ದಾರೆ.

Read the full story on Anukshana