ಸಂಪಾದಕರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮುಕ್ತ ಸಂವಾದ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಿಧ ಮಾಧ್ಯಮ ಸಂಸ್ಥೆಗಳ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರೊಂದಿಗೆ ಸಂವಾದ ನಡೆಸಿದರು. ಗ್ಯಾರಂಟಿ ಯೋಜನೆಗಳು, ಭೂ-ಗ್ಯಾರಂಟಿ, ಬೆಂಗಳೂರು ಸಂಚಾರ, ಪ್ರವಾಸೋದ್ಯಮ, ಕೈಗಾರಿಕೆ, ಕೆಪಿಎಸ್‌ಸಿ ನೇಮಕಾತಿ ಹಾಗೂ ಆಡಳಿತ ಸುಧಾರಣೆ ಕುರಿತು ಮಾತನಾಡಿದರು. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ಸಹಕಾರ ಅಗತ್ಯವಿದ್ದು, ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು. ಇತಿಹಾಸ ಬರೆಯುವುದಕ್ಕಿಂತ ಇತಿಹಾಸ ಸೃಷ್ಟಿಸುವ ಗುರಿ ಹೊಂದಿರುವುದಾಗಿ ಅವರು ತಿಳಿಸಿದರು.