ಬೆಂಗಳೂರು: ಕರ್ನಾಟಕ ರಾಜ್ಯ ದೇವಾಂಗ ನೌಕರರ ಸಂಘ (ರಿ) ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಬೆಳಿಗ್ಗೆ 10.00 ಗಂಟೆಗೆ ‘ಕರ್ನಾಟಕ ರಾಜ್ಯ ದೇವಾಂಗ ಮಹಿಳಾ ಜಾಗೃತಿ ಸಮಾವೇಶ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ’ ಭವ್ಯವಾಗಿ ನಡೆಯಲಿದೆ.
ಈ ಸಮಾರಂಭದಲ್ಲಿ ‘ಪದ್ಮಶ್ರೀ ಪ್ರಶಸ್ತಿ’ ಪುರಸ್ಕೃತ ಎಸ್.ಜಿ. ಸುಶೀಲಮ್ಮ ಹಾಗೂ ‘ಡಾ: ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ’ ಪುರಸ್ಕೃತ ಉಮಾಶ್ರೀ ಅವರಿಗೆ ವಿಶೇಷ ಸನ್ಮಾನ ಏರ್ಪಡಿಸಲಾಗಿದೆ. ಜೊತೆಗೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಸಾಧಕ ಮಹಿಳೆಯರಿಗೂ ಗೌರವ ಸಲ್ಲಿಸಲಾಗುತ್ತದೆ.
ರಾಜ್ಯದ ಎಲ್ಲ ಜಿಲ್ಲೆಗಳಿಂದ ಸುಮಾರು 600ಕ್ಕೂ ಹೆಚ್ಚು ಮಹಿಳೆಯರು ಮತ್ತು ಅತಿಥಿಗಳು ಈ ಮಹತ್ವದ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಮಹಿಳಾ ಶಕ್ತೀಕರಣ ಮತ್ತು ಸಾಧನೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮಹಿಳಾ ಕೇಂದ್ರಿತ ಈ ಬೃಹತ್ ಸಮಾರಂಭಕ್ಕೆ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ನೀಡುವಂತೆ ಹಾಗೂ ಕಾರ್ಯಕ್ರಮದ ವರದಿಯನ್ನು ಪ್ರಕಟಿಸುವ ಮೂಲಕ ಮಹಿಳಾ ಚಟುವಟಿಕೆಗಳಿಗೆ ಉತ್ತೇಜನ ನೀಡುವಂತೆ ಸಂಘದ ಅಧ್ಯಕ್ಷ ನಾಗೇಶ್ ಕುಮಾರ್ ವಿನಂತಿಸಿದ್ದಾರೆ.




