- Home
- Short News

Anukshanaದಲಿತ ವಿರೋಧಿ ನೀತಿಗಳ ವಿರುದ್ಧ ಛಲವಾದಿ ಸಂಗಮ ಬಲವರ್ಧನೆ
ಬೆಂಗಳೂರು: ದಲಿತ ಹಾಗೂ ಛಲವಾದಿ ಸಮುದಾಯದ ಹಕ್ಕುಗಳ ರಕ್ಷಣೆಗಾಗಿ ರಾಜ್ಯ ಛಲವಾದಿ ಸಂಗಮ ಸಂಘಟನೆಯನ್ನು ರಾಜ್ಯಾದ್ಯಂತ ಬಲಪಡಿಸಲು ನಿರ್ಧರಿಸಲಾಗಿದೆ. ಎಸ್ಸಿಎಸ್ಪಿ–ಟಿಎಸ್ಪಿ ಅನುದಾನ, ವಿದ್ಯಾರ್ಥಿ ವೇತನ ಹಾಗೂ ಮೀಸಲಾತಿ ವರ್ಗೀಕರಣದಲ್ಲಿ ಅನ್ಯಾಯವಾಗುತ್ತಿದೆ ಎಂದು ಮುಖಂಡರು ಆರೋಪಿಸಿದರು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿದರು. ತಾಲೂಕು, ಜಿಲ್ಲಾ ಸಮಿತಿಗಳ ಪುನರ್ರಚನೆ, ಸದಸ್ಯತ್ವ ನೋಂದಣಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯಾಧ್ಯಕ್ಷ ನವೀನ್ ಮಾನ್ಯ ತಿಳಿಸಿದರು.





