- Home
- Short News

Anukshanaಕೆಆರ್ಎಸ್ ಜಲಾಶಯದ ಮಟ್ಟ ಏರಿಕೆ
ಕಳೆದ ಮೂರು ದಿನಗಳ ಮಳೆಯಿಂದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಬಿಡುಗಡೆ ನಿರೀಕ್ಷೆ. ಜಲಾಶಯಕ್ಕೆ ಪ್ರಸ್ತುತ ೨೫,೦೦೦ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ನೀರಿನ ಮಟ್ಟ ೧೨೦ ಅಡಿ ದಾಟಿದೆ. ಕೊಡಗು ಭಾಗದಲ್ಲಿ ಮಳೆ ಮುಂದುವರಿದಿರುವುದರಿಂದ ಒಳಹರಿವು ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ನಾಲೆಗಳಿಗೆ ನೀರು ಹರಿಸುವ ಬಗ್ಗೆ ನೀರಾವರಿ ಸಲಹಾ ಸಮಿತಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದೆ.






