ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ
1min read
ಸಿಎಂ ಡಿ ಕೆ ಶಿವಕುಮಾರ್ ಅವರು 157ನೇ ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಶುಕ್ರವಾರ 'ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ, ಗಾಂಧಿ ಡಿಜಿಟಲ್ ಮ್ಯೂಸಿಯಂ ಮತ್ತು ಗಾಂಧಿ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು
ಈ ಸಂದರ್ಭದಲ್ಲಿ ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು. ನಾನಾ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು.
ಸಚಿವ ರಿಜ್ವಾನ್ ಅರ್ಷದ್, ಎಚ್.ಸಿ. ಬಾಲಕೃಷ್ಣ, ಮಾಜಿ ಸಚಿವ ಹಾಗೂ ಗಾಂಧಿ ಭಾರತ ಶತಮಾನೋತ್ಸ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್, ನಿವೃತ್ತ ನ್ಯಾಯಮೂರ್ತಿ ಟಿ ಜಿ ಶಿವಶಂಕರಗೌಡ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲಾದಪುರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ , ಆಯುಕ್ತ ಎಂ.ಎನ್. ಅನುಚೇತ್ ಮತ್ತಿತರರು ಉಪಸ್ಥಿತರಿದ್ದರು.
Read this:ಕುಟುಂಬದೊಂದಿಗೆ ಆಯುಧ ಪೂಜೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
No ratings yet





