ರಾಹುಲ್ ಗಾಂಧಿ ನನ್ನನ್ನು ತಳ್ಳಿಲ್ಲ, ಕಾಳಜಿ ತೋರಿದ್ದಾರೆ: ಸಿಎಂ ಸ್ಪಷ್ಟನೆ
ದೆಹಲಿ ಎಸ್ಐಆರ್ ಪ್ರತಿಭಟನೆ ವೇಳೆ ನಡೆದ ಘಟನೆ ಕುರಿತು ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನಸಂದಣಿ ಹೆಚ್ಚಿದ್ದ ಕಾರಣ ರಾಹುಲ್ ಗಾಂಧಿ ಅವರು ವಾಹನದಲ್ಲಿ ಬರುವಂತೆ ಸಲಹೆ ನೀಡಿದ್ದರು ಎಂದು ಹೇಳಿದರು. ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, “ನನ್ನ ಮೇಲೆ ಬಿಜೆಪಿಯವರಿಗೆ ಪ್ರೀತಿ ಜಾಸ್ತಿ” ಎಂದು ವ್ಯಂಗ್ಯವಾಡಿದರು.
1min read
ರಾಹುಲ್ ತಳ್ಳಿಲ್ಲ, ಕಾಳಜಿ ತೋರಿದ್ದಾರೆ: ಡಿಕೆಶಿ
ನವದೆಹಲಿ: ದೆಹಲಿ ಚಲೋ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮನ್ನು ತಳ್ಳಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಳ್ಳಿಹಾಕಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರು ನನ್ನನ್ನು ತಳ್ಳಿಲ್ಲ. ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗಿದ್ದರಿಂದ ಹಿಂದೆ ಬರುತ್ತಿದ್ದ ವಾಹನದಲ್ಲಿ ಹತ್ತುವಂತೆ ಸಲಹೆ ನೀಡಿ ನನ್ನ ಬಗ್ಗೆ ಕಾಳಜಿ ತೋರಿದರು” ಎಂದು ಸ್ಪಷ್ಟಪಡಿಸಿದರು.
ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಅವರನ್ನು ತಳ್ಳಿದ್ದಾರೆ ಎಂದು ಬಿಜೆಪಿ ನಾಯಕರು ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ,
“ಪ್ರತಿಭಟನೆಯಲ್ಲಿ ಯಾರೂ ನನ್ನನ್ನು ತಳ್ಳಲಿಲ್ಲ. ಅಲ್ಲಿ ಜನಸಂದಣಿ ಹೆಚ್ಚಾಗಿತ್ತು. ಎಲ್ಲರ ಸುರಕ್ಷತೆ ದೃಷ್ಟಿಯಿಂದ ವಾಹನದಲ್ಲಿ ಬರುವಂತೆ ಹೇಳಲಾಗಿತ್ತು. ಬಿಜೆಪಿ ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ, ಅದಕ್ಕಾಗಿಯೇ ಇಂತಹ ಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳಿದರು.
Read this:ಮತಗಳ್ಳತನದ ವಿರುದ್ಧ ಕರ್ನಾಟಕದಲ್ಲಿ ತನಿಖೆ ಮುಂದುವರೆಸುತ್ತೇವೆ: ಸಿಎಂ
No ratings yet





