ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ರಕ್ಷಣಾ ಭೂಮಿ ಬಳಕೆ, ರಸ್ತೆ ಸಂಪರ್ಕ, ಟ್ವಿನ್ ಟನಲ್, ಮೆಖ್ರಿ ಸರ್ಕಲ್ ರಸ್ತೆ ವಿಸ್ತರಣೆ ಸೇರಿದಂತೆ ನಗರದ ಭವಿಷ್ಯದ ಬೆಳವಣಿಗೆಗೆ ಸಂಬಂಧಿಸಿದ 7 ಪ್ರಮುಖ ಪ್ರಸ್ತಾವನೆಗಳಿಗೆ ತ್ವರಿತ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

DK Shivakumar (Politician)
Latest news
ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ನೆರವು ಕೋರಿ ದೆಹಲಿಗೆ ತೆರಳುವ ಸರ್ವಪಕ್ಷ ನಿಯೋಗದಲ್ಲಿ ಬಿಜೆಪಿ ನಾಯಕರು ಭಾಗವಹಿಸದಿದ್ದರೆ ಅದು ಕೇವಲ ರಾಜಕೀಯ ನಾಟಕವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ರೈತರ ಹಿತಾಸಕ್ತಿಗಾಗಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದ ಅವರು, ಕೇಂದ್ರ ಅಧ್ಯಯನ ತಂಡದ ಭೇಟಿ, ಕಸ್ತೂರಿರಂಗನ್ ವರದಿ ಸೇರಿದಂತೆ ಹಲವು ವಿಷಯಗಳ ಕುರಿತು ಶೀಘ್ರದಲ್ಲೇ ಚರ್ಚೆ ನಡೆಸುವುದಾಗಿ ತಿಳಿಸಿದರು.
ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿಗಳು 35 ವಿಭಾಗಗಳಲ್ಲಿ ಪ್ರದಾನ ಪ್ರವಾಸೋದ್ಯಮವನ್ನು ಹೆಚ್ಚು ಒಳಗೊಳ್ಳುವ, ಸುಸ್ಥಿರ ಮತ್ತು ಅರ್ಥಪೂರ್ಣವಾಗಿಸಲು ಎಐ ಬಳಸಿ: ಸಚಿವ ಕೆ.ಜೆ. ಜಾರ್ಜ್ ಡಿಜಿಟಲ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯಿಂದ ವೈಯಕ್ತಿಕ ಪ್ರವಾಸ ಅನುಭವ ಹಾಗೂ ದತ್ತಾಂಶ ಆಧಾರಿತ ಪ್ರವಾಸ ನಿರ್ವಹಣೆಗೆ ಒತ್ತು
ಕೆಲವೇ ತಿಂಗಳಲ್ಲಿ ಪೌರ ಕಾರ್ಮಿಕರಿಗಾಗಿ ಪೌರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ; ಪೌರ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಕೆಪಿಎಸ್ ಮಾದರಿಯಲ್ಲಿ ವಸತಿ ಶಾಲೆಗಳ ನಿರ್ಮಾಣ; ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ; ಕಾಂಗ್ರೆಸ್ ಸರ್ಕಾರ ಹಾಗೂ ಪೌರ ಕಾರ್ಮಿಕರ ನಡುವೆ ಭಕ್ತ-ಭಗವಂತನ ಸಂಬಂಧ

