ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಉಡುಗೊರೆ: ಲೀಟರ್ ಪೆಟ್ರೋಲ್, ಡೀಸೆಲ್ ದರ ತಲಾ ₹10 ಇಳಿಕೆ
ಜಾಗತಿಕ ಮಟ್ಟದಲ್ಲಿ ಪಶ್ಚಿಮ ಏಷ್ಯಾದ ಯುದ್ಧ ಭೀತಿ ಮತ್ತು ಅಸ್ಥಿರತೆಯ ನಡುವೆಯೂ ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 10 ರೂಪಾಯಿ ಕಡಿತಗೊಳಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿದ್ದು, ಹಬ್ಬದ ಸಂಭ್ರಮದಲ್ಲಿರುವ ಜನ ಸಾಮಾನ್ಯರಿಗೆ ಇದು ದೊಡ್ಡ ಸಮಾಧಾನ ತಂದಿದೆ. ಪೆಟ್ರೋಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ₹13 ರಿಂದ ₹3 ಕ್ಕೆ ಇಳಿಸಿದರೆ, ಡೀಸೆಲ್ ಮೇಲಿನ ಸುಂಕವನ್ನು ₹10 ರಿಂದ ಸಂಪೂರ್ಣವಾಗಿ ಶೂನ್ಯಕ್ಕೆ (ನಿಲ್) ಇಳಿಸಲಾಗಿದೆ.




